ಪಿಎಫ್‌ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ– ಕೆ.ಸಿ.ವೇಣುಗೋಪಾಲ

ಗುರುವಾರ, 11 ಜನವರಿ 2018 (14:09 IST)
ಪಿಎಫ್‌ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ಪ್ರಶ್ನೆಯೇಯಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹೇಳಿದ್ದಾರೆ.
 
ವಿಜಯಪುರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಸಿದ್ಧತೆಗೆ ಬಂದಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಮತ್ತು ಅಪರಾಧ ಪ್ರಕರಣಗಳಲ್ಲಿ ಒಂದು ಕಡೆ ಬಿಜೆಪಿ ಮತ್ತೊಂದು ಕಡೆ ಆರ್ ಎಸ್‍ಎಸ್ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.
 
ಬಿಜೆಪಿಯವರೇ ಅಪರಾಧ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಾರೆ. ಬಿಜೆಪಿ ಕ್ರಿಮಿನಲ್ ರಾಜಕೀಯದಿಂದ ಹೊರ ಬರಬೇಕು. ಜನರನ್ನು ಕೋಮು ಆಧಾರದ ಮೇಲೆ ವಿಭಜಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಸಲು ಬಿಜೆಪಿ ಮತ್ತು ಆರ್ ಎಸ್‍ಎಸ್ ಪ್ರಯತ್ನಿಸುತ್ತಿವೆ. ಚುನಾವಣೆಯಲ್ಲಿ ಕನ್ನಡಿಗರು ಇದಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಮತವಿಲ್ಲ. ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳೊಂದಿಗೆ ಅಧಿಕಾರ ಹಿಡಿಯಲಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ