ರಾಜ್ಯ ಮುಕ್ತ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ: ರಾಯರೆಡ್ಡಿ
ಸೋಮವಾರ, 9 ಅಕ್ಟೋಬರ್ 2017 (16:01 IST)
ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಕ್ತ ವಿಶ್ವವಿದ್ಯಾಲಯ ಮುಚ್ಚುವ ಹಂತವನ್ನು ತಲುಪಿದೆ ಎಂದು ಹೇಳಿದ್ದೇನೆಯೇ ಹೊರತು ಮುಚ್ಚುತ್ತೇವೆ ಎಂದು ಹೇಳಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ವಿಶ್ವವಿದ್ಯಾಲಯ ಸುಧಾರಣೆಗೆ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ನೇತೃತ್ವದಲ್ಲಿ ಐವರ ಸಮಿತಿಯನ್ನು ರಚಿಸಲಾಗಿದೆ. 15 ದಿನಗಳಲ್ಲಿ ಸಮಿತಿ ವರದಿ ನೀಡುತ್ತದೆ. ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಹಣ ದುರುಪಯೋಗವಾಗಬಾರದು ಎನ್ನುವ ಉದ್ದೇಶದಿಂದ ಸಮಿತಿ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.