ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ : ನಿತಿನ್ ಗಡ್ಕರಿ

ಶುಕ್ರವಾರ, 6 ಜನವರಿ 2023 (10:08 IST)
ರಾಮನಗರ: ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗಳಿಗೆ ನಂಬರ್ ಅಷ್ಟೇ ಕೊಡೋದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದರು.

ಬೆಂಗಳೂರು-ಮೈಸೂರು ದಶಪಥ ರಸ್ತೆ ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಹೆದ್ದಾರಿಗೆ ಹೆಸರು ಇಡುವಂತೆ ಕೇಳಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಒತ್ತಾಯ ಕೇಳಿಬರುತ್ತಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ನಾನು ಕೂಡ ಆ ಪತ್ರವನ್ನ ನೋಡಿದ್ದೇನೆ. ಆದರೆ ಹೆದ್ದಾರಿಗಳಿಗೆ ಹೆಸರಿಡುವ ಸಂಪ್ರದಾಯ ಇಲ್ಲ. ನಾವು ಹೆದ್ದಾರಿಗೆ ನಂಬರ್ ಅಷ್ಟೇ ಕೊಡುತ್ತೇವೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಬಳಿಕ ಪ್ರಧಾನಿಯವರ ಒಪ್ಪಿಗೆ ಪಡೆದು ಆಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ