ಜಲಾಶಯಗಳಲ್ಲಿ ನೀರಿಲ್ಲ, ಬಿಡೋದೆಲ್ಲಿಂದ ಬಂತು : ಸಿಎಂ

ಮಂಗಳವಾರ, 18 ಅಕ್ಟೋಬರ್ 2016 (19:42 IST)
ಮುಂದಿನ ಆದೇಶದವರೆಗೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನಮ್ಮ ಜಲಾಶಯಗಳಲ್ಲಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಆದೇಶದವರೆಗೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಆದೇಶ ಪ್ರತಿ ನನ್ನ ಕೈ ಸೇರಿಲ್ಲ. ನಮ್ಮ ಜಲಾಶಯಗಳಲ್ಲಿ ನೀರಿಲ್ಲ. ಈ ಕುರಿತು ನಮ್ಮ ವಕೀಲರ ಬಳಿ ಚರ್ಚಿಸುತ್ತೇನೆ ಎಂದು ಹೇಳಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ 2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಗಳು ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು.
 
ಮುಂದಿನ ಆದೇಶ ನೀಡುವವರೆಗೂ ಹಿಂದೆ ನೀಡಿರುವ ಆದೇಶದಂತೆ ಕಾವೇರಿಯಿಂದ ತಮಿಳುನಾಡಿಗೆ ಪ್ರತಿ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಅಜಯ್ ಎಂ, ಖಾನ್ವಿಲ್ಕರ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಸೂಚನೆ ನೀಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ