ಸ್ಥಾನ ಬದಲಾಗುವ ನೀರಿಕ್ಷೆ ಇರಲಿಲ್ಲ: ಸುಧಾಕರ್

ಬುಧವಾರ, 26 ಜನವರಿ 2022 (12:26 IST)
ಚಿಕ್ಕಬಳ್ಳಾಪುರ : ಜಿಲ್ಲಾ ಉಸ್ತುವಾರಿ ಜಿಲ್ಲೆ ಸ್ಥಾನ ಬದಲಾಗುವ ನೀರಿಕ್ಷೆ ಇರಲಿಲ್ಲ ಎಂದು ಆರೋಗ್ಯ ಸಚಿವ ಹಾಗೂ ನೂತನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ನನಗೆ ಬಹಳ ಅಭಿಮಾನವಿದೆ. ಜನರ ಹಿತವನ್ನು ಕಾಪಾಡುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಉಸ್ತುವಾರಿಗಳ ಬದಲಾವಣೆಯಿಂದ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಹಿನ್ನೆಡೆ ಆಗುವುದಿಲ್ಲ. ಈಗಾಗಲೇ ನಾವು ಮುಖ್ಯಮಂತ್ರಿಗಳ ತೀರ್ಮಾನದಂತೆ ನಾವು ಕರ್ತವ್ಯ ನಿರತರಾಗಿದ್ದೇವೆ. ಯಾರಿಗಾದರೂ ಅಸಮಾಧಾನ ಇದ್ದರೆ ಪಕ್ಷದ ಆಂತರಿಕ ವಿಚಾರ ಇರುವುದರಿಂದ ಕೆಲವರು ಅಲ್ಲಿ ಚರ್ಚೆ ಮಾಡಬಹುದು ಎಂದು ತಿಳಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ