ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬರಗಾಲವೇ ಬರಲ್ಲ : ಅಶೋಕ್
ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದರೇ ಬರಗಾಲವೇ ಬರುವುದಿಲ್ಲ. ಅಷ್ಟೇ ಅಲ್ಲದೇ ಅತಿ ಹೆಚ್ಚು ಮಳೆ ಬರುವುದರಿಂದಾಗಿ ತಮಿಳುನಾಡು ಬೇಡ ಹೇಳುವಷ್ಟು ನೀರು ಬಿಟ್ಟಿದ್ದೇವೆ ಎಂದರು.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಕಂದಾಯ ದಾಖಲೆ ಮನೆ ಬಾಗಿಲಿಗೆ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ.
ವಿಜಯನಗರ ಜಿಲ್ಲೆ ಮಾಡಲು ಮೊದಲು ಕಂದಾಯ ಇಲಾಖೆ ಶಿಫಾರಸು ಮಾಡಿದ್ದೆವು ಎಂದ ಅವರು, ಭೂಕಬಳಿಕೆ ಕಾನೂನು ಬದಲಾವಣೆ ಮಾಡಿದ್ದೇವೆ. ರೈತರ ಮೇಲೆ ಕೇಸ್ ಹಾಕುವುದಿಲ್ಲ ಎಂದು ಭರವಸೆ ನೀಡಿದರು.