ಮುಂಬರುವ ಚುನಾವಣೆಯಲ್ಲಿ ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಲ್ಲ

ಮಂಗಳವಾರ, 22 ಆಗಸ್ಟ್ 2017 (15:15 IST)
ಮುಂಬರುವ ವಿಧಾನಸಭೆ ಚುನಾವಣೆ ಪೂರ್ವ ಸಿದ್ದತೆಯಲ್ಲಿ ಇತರ ಪಕ್ಷಗಳಿಗಿಂತ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ಮುಖಂಡರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿರುವುದು ತಲೆನೋವು ಉಂಟು ಮಾಡಿದೆ. 
ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಟಿಕೆಟ್‌ಗಳನ್ನು ಹಂಚುವಾಗ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರಲ್ಲಿ  ಜನರಿಗೆ ಪ್ರೀತಿಪಾತ್ರರಾಗಿರುವವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದವರಿಗೆ ಮಾತ್ರ ಪರಿಗಣಿಸಲಾಗುವುದು ಎಂದು ಸಿಎಂ ಧೃಢವಾದ ಸಂದೇಶ ರವಾನಿಸಿದ್ದಾರೆ.
 
ಜನಪ್ರಿಯತೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡದ ಶಾಸಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಸಿಎಂ ಇಬ್ರಾಹಿಂ ಅವರಿಗೆ ವಿಧಾನಪರಿಷತ್ ಸ್ಥಾನ ನೀಡಿರುವುದು ದೊಡ್ಡ ವಿಷಯವಾಗಿದೆ. ಅವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎನ್ನುವ ಹೇಳಿಕೆ ನೋಡಿದಲ್ಲಿ ಅಭ್ಯರ್ಥಿಗಳ ಆಯ್ಕೆ ತುಂಬಾ ಕಠಿಣವಾಗಿರುತ್ತದೆ ಎನ್ನುವ ಸ್ಪಷ್ಟ ಸಂದೇಶವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 
 
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಏಕೈಕ ದೊಡ್ಡ ರಾಜ್ಯವಾಗಿರುವ ಕರ್ನಾಟಕದ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಕಾಂಗ್ರೆಸ್ ಮುಖಂಡರು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಭಿನ್ನಾಭಿಪ್ರಾಯ ಮತ್ತು ನಿರಾಶೆಗಳನ್ನು ಮರೆತು ಒಗ್ಗಟ್ಟಾಗಿ ಬಿಜೆಪಿಯನ್ನು ಎದುರಿಸಲು ಸಿದ್ದರಾಗಿದ್ದಾರೆ ಎನ್ನಲಾಗುತ್ತಿದೆ. 
 
ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡದ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮಾಡದ ಶಾಸಕರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಬಗ್ಗೆ ಮಾನಸಿಕವಾಗಿ ಸಿದ್ದರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ