ಅನರ್ಹ ಶಾಸಕರಿಗೆ ಬಿಜೆಪಿಯಲ್ಲಿ ಸಿಕ್ಕಿದೆ ಭಾರೀ ಮನ್ನಣೆ

ಬುಧವಾರ, 21 ಆಗಸ್ಟ್ 2019 (11:51 IST)
ಬೆಂಗಳೂರು : ತಮ್ಮ ಪಕ್ಷದಿಂದಲ್ಲೇ ಅನರ್ಹರಾದ ಶಾಸಕರಿಗೆ ಬಿಜೆಪಿಯಲ್ಲಿ ಬಾರೀ ಮನ್ನಣೆ ಸಿಕ್ಕಿದೆ. ಅನರ್ಹ ಶಾಸಕರ ಹಿತಕಾಯಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಹೌದು. ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಲು ಕಾರಣರಾದ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಅವರನ್ನು ಕೇಳಿಯೇ ಮಾಡುವಂತೆ ಮುಖ್ಯಮಂತ್ರಿ ಕಚೇರಿಯಿಂದಲೇ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಹೇಳಲಾಗಿದೆ.


ಅನರ್ಹ ಶಾಸಕರು ಸಿಎಂ ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಅವರು ಹೇಳಿದ ಕೆಲಸಗಳನ್ನು ಮಾಡಿಕೊಡುವಂತೆ ಅಧಿಕಾರಿಗಳಿಗೆ  ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ