ಖಾಸಗಿ ಕಂಪನಿ ಉದ್ಯೋಗಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿದ ದರೋಡೆಕೋರರು

ಸೋಮವಾರ, 4 ಅಕ್ಟೋಬರ್ 2021 (21:21 IST)
ಖಾಸಗಿ ಕಂಪನಿ ಉದ್ಯೋಗಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿದ ದರೋಡೆಕೋರರು 15 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾರುತಿನಗರದ ಶೇಖರ್‍ರೆಡ್ಡಿ ಚಿನ್ನದ ಸರ ಕಳೆದುಕೊಂಡವರು. ಖಾಸಗಿ ಕಂಪನಿಯ ಸೇಲ್ಸ್ ಎಕ್ಸಿಕ್ಯೂಟೀವ್ ಆದ ಇವರು, ಭಾನುವಾರ ಸಂಜೆ 4.30ರ ಸಮಯದಲ್ಲಿ ಆರ್.ಟಿ. ನಗರದಿಂದ ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದರು. ಮನೆ ಸಮೀಪಕ್ಕೆ ಬರುತ್ತಿದ್ದಂತೆ ನಿರ್ಜನ ಪ್ರದೇಶದಲ್ಲಿ ಎರಡು ಬೈಕ್‍ನಲ್ಲಿ ಬಂದ ನಾಲ್ವರು ದರೋಡೆಕೋರರು ಶೇಖರ್ ಅವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಅವರ ಕೊರಳಲಿದ್ದ 15 ಗ್ರಾಂ ಚಿನ್ನದ ಸರ, ಮೊಬೈಲ್ ಹಾಗೂ ಮೂರು ಸಾವಿರ ನಗದು ಕಸಿದು ಪರಾರಿಯಾಗಿದ್ದಾರೆ. 
ಶೇಖರ್ ಕೂಡಲೇ ಯಲಹಂಕ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ