ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ– ರಾಮಲಿಂಗಾರೆಡ್ಡಿ
ಶುಕ್ರವಾರ, 12 ಜನವರಿ 2018 (14:17 IST)
ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದು, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ದೂರಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.