ಕರ್ನಾಟಕ ಸರ್ಕಾರವು ನಿನ್ನೆ ಶಕ್ತಿ ಯೋಜನೆಗೆ ಚಾಲನೆ ನೀಡಿತು. ಈ ಯೋಜನೆಯ ಅಡಿ ಮಹಿಳೆಯರು ರಾಜ್ಯ ಸಾರಿಗೆಯ ನಾಲ್ಕು ನಿಗಮದ KSRTC, BMTC, NWKSRTC, KKRTC ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮತ್ತು ಸುರಕ್ಷಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡಲು ಈ ವರ್ಷ 1,894 ಹೊಸ ಬಸ್‌ಗಳನ್ನು ಖರೀದಿಸಲು ಸಾರಿಗೆ ನಿಗಮ ಯೋಚಿಸಿವೆ. ಶಕ್ತಿ ಯೋಜನೆ ಅನುಷ್ಠಾನದ ನಂತರ, ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ಬಸ್‌ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.