ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇದೀಗ ಮೂರನೇ ಅತ್ಯಾಚಾರ ಪ್ರಕರಣ ಸಂಬಂದ ಎಸ್‍ಐಟಿ ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಎರಡು ರೇಪ್ ಕೇಸ್ ಸಂಬಂಧ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿತ್ತು. ಇದೀಗ ಎಸ್‍ಐಟಿ ಮೂರನೇ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ನೀಡಿದ ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.
ನಿನ್ನೆಯಷ್ಟೆ 2ನೇ ಕೇಸ್‍ನಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 42ನೇ ಎಸಿಎಂಎಂ ಕೋರ್ಟ್‍ನ ನ್ಯಾ ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು. ಅದರಂತೆ ಪ್ರಜ್ವಲ್‍ರನ್ನು ಜೈಲಿಗೆ ಕಳಿಸಲಾಗಿತ್ತು. ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದು ಜೂನ್ 24ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಈ ಮಧ್ಯೆ ಇಂದು ಎಸ್‍ಐಟಿ ಪ್ರಜ್ವಲ್ ವಿರುದ್ಧದ 3ನೇ ಅತ್ಯಾಚಾರ ಕೇಸ್‍ನಲ್ಲಿ ಕಸ್ಟಡಿಗೆ ಪಡೆದಿದೆ.