ದಲಿತ ಮುಖ್ಯಮಂತ್ರಿ ವಿಚಾರ ಅಪ್ರಸ್ತುತ: ಎಚ್.ಅಂಜನೇಯ್

ಗುರುವಾರ, 21 ಜುಲೈ 2016 (12:40 IST)
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರ ಈಗ ಅಪ್ರಸ್ತುತ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ್ ಅವರು ಮಾಜಿ ಸಚಿವ ಜಾಫರ್ ಷರೀಫ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಕೇಂದ್ರ ಸಂಸಧೀಯ ಸಚಿವ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ್, 2008 ರ ಸಾಲಿನಲ್ಲಿ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೆ, 2013 ರ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಿದೆ. ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ತಿಳಿಸಿದರು.
 
2018 ರ ಸಾಲಿನಲ್ಲಿ ನಡೆಯುವ ವಿಧಾನಸಭೆ ಚುನಾವಣೆ ನೇತೃತ್ವ ವಹಿಸುವುದು ಕಾಂಗ್ರೆಸ್ ಹೈ-ಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರ ಸಧ್ಯ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದ್ದಾರೆ.
 
ದಲಿತ ಸಮುದಾಯದ ನಾಯಕರಲ್ಲಿ ಜೆ.ಪರಮೇಶ್ವರ್ ಅವರು ಎದ್ದು ಕಾಣುವ ನಕ್ಷತ್ರ. ಅವರು ಏಕೆ ರಾಜ್ಯದ ಮುಖ್ಯಮಂತ್ರಿ ಆಗಬಾರದು ಎಂದು ಮಾಜಿ ಸಚಿವ ಜಾಫರ್ ಷರೀಫ್ ಮತ್ತೆ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರವನ್ನು ಪ್ರಸ್ತಾಪಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ