ಈ ಬಂಡೆ ಸಿದ್ದರಾಮಯ್ಯ ಜತೆಗೆ ಸದಾ ಇರುತ್ತದೆ: ಡಿಕೆ ಶಿವಕುಮಾರ್‌

Sampriya

ಗುರುವಾರ, 5 ಡಿಸೆಂಬರ್ 2024 (16:12 IST)
ಹಾಸನ: ಸಿಎಂ ಸಿದ್ದರಾಮಯ್ಯ ಜತೆಗೆ ಈ ಬಂಡೆ ಸದಾ ಇರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಹಾಸನ ಸಮಾವೇಶದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಜಿಲ್ಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶಗೊಂಡು, ನೊಂದ ತಾಯಂದಿರಿಗೆ ಧೈರ್ಯ ತುಂಬಲು ಹಾಸನ ಜಿಲ್ಲೆಯ ಜನರು ಸಂಸದ ಶ್ರೇಯಸ್‌ ಪಟೇಲ್ ಅವರಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.

2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ನಿಶ್ಚಿತ. ಐದು ಗ್ಯಾರಂಟಿಗಳು ಪರ್ಮನೆಂಟ್. ಬಿಜೆಪಿ- ಜೆಡಿಎಸ್‌ನವರ ಟೀಕೆಗಳಿಗೆ ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಮೂಲಕ ರಾಜ್ಯದ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದರು.

ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಮುಂದೆ ಹಾಸನ ಜಿಲ್ಲೆಯಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಹಾಸನದ ಜಿಲ್ಲೆಯನ್ನು ನೋಡಿದರೆ ಸಂಕಟವಾಗುತ್ತದೆ. ತಾಯಂದಿರ ಸ್ವಾಭಿಮಾನ ಉಳಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಿದ್ದೇವೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ