ಬಿಜೆಪಿ ಶಾಸಕನ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಮಹಿಳೆ ಬೆಂಗಳೂರು ಪೊಲೀಸ್ ಕಮಿಷನರ್ ಮೊರೆ ಹೋಗಿದ್ದಾರೆ. ನನಗೆ ಮಹಿಳೆಯೊಬ್ಬಳು ಎರಡು ಕೋಟಿ ರೂ. ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರಾಜ್‌ಕುಮಾರ್ ತೇಲ್ಕರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಬಳಿಕ ಸಂತ್ರಸ್ತ ಮಹಿಳೆಯನ್ನು ವಿಚಾರಣೆ ನಡೆಸಿ ವಿಧಾನಸೌಧ ಪೊಲೀಸರು ಬಿಟ್ಟು ಕಳಿಸಿದ್ದರು. ಇದೀಗ ಸಂತ್ರಸ್ತ ಮಹಿಳೆ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ತನಗೆ ಅನ್ಯಾಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರಿಗೆ ದೂರು ಸಲ್ಲಿಸಿದ್ದಾರೆ. ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಮಹಿಳೆ ಒತ್ತಾಯಿಸಿದರು.