ಈ ಬಾರಿ ಬಿಜೆಪಿ 125ರಿಂದ 130 ಸ್ಥಾನಗಳನ್ನು ಗೆಲ್ಲಲಿದೆ : ಯಡಿಯೂರಪ್ಪ

ಗುರುವಾರ, 11 ಮೇ 2023 (10:40 IST)
ಶಿವಮೊಗ್ಗ : ರಾಜ್ಯದಲ್ಲಿ ಈ ಬಾರಿ ಬಿಜೆಪಿ 125ರಿಂದ 130 ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಶಿಕಾರಿಪುರದಲ್ಲಿ ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಸ್ವತಂತ್ರ ಸರ್ಕಾರ ನಡೆಸುತ್ತೇವೆ.

ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರಿಗೆ ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಇದೆ. ನಾವು ಹೆಚ್ಚಿನ ಸ್ಥಾನವನ್ನು ಗೆಲ್ಲಲಿದ್ದೇವೆ ಎಂದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ