ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು : ಉಮಾಪತಿ ಶ್ರೀನಿವಾಸ ಗೌಡ

ಸೋಮವಾರ, 15 ಮೇ 2023 (12:43 IST)
ಬೆಂಗಳೂರು : ಡಿಕೆ ಶಿವಕುಮಾರ್ ಸಿಎಂ ಆಗಲು ಬಯಸಿದರೆ ಅವರು ಒಬ್ಬೊಂಟಿಯಲ್ಲ ಜೊತೆಗೆ ನಾವು ನಿಲ್ಲುತ್ತೇವೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಉಮಾಪತಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.
 
ಈ ಬಾರಿ ಸಿಎಂ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು. ಅದಕ್ಕಾಗಿ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸುತ್ತೇವೆ. ಅವರಿಗೆ ಸಿಎಂ ಆಗಲು ಅವಕಾಶ ಇದುವರೆಗೂ ಸಿಕ್ಕಿಲ್ಲ. ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಆಗಿದ್ದಾರೆ. ಆದರೆ ಡಿಕೆಶಿ ಇದುವರೆಗೂ ಸಿಎಂ ಆಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ