ಈ ಬಾರಿ ವಾಡಿಕೆಯಷ್ಟು ಮಳೆ ಇಲ್ಲ- ಪ್ರಸಾದ್
ರಾಜ್ಯದಲ್ಲಿ ವಾಡಿಕೆಯಷ್ಟು ಮಳೆ ಸುರಿದಿಲ್ಲ.ರಾಜ್ಯದಲ್ಲಿ 51% ಮಳೆ ಕೊರತೆಯಾಗಿದ್ದು ರಾಜ್ಯದ ಜನ ಕಂಗಾಲಾಗಿದ್ದಾರೆ.ಉತ್ತರ ಒಳನಾಡಿನಲ್ಲಿ ಮಳೆ ಕೊರತೆ ಕಾಡುತ್ತಿದೆ.ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ ತಿಂಗಳುಗಳಲ್ಲಿ ಉತ್ತಮ ಮಳೆಯಾಗಿದೆ.ದಕ್ಷಿಣ ಒಳನಾಡಿನಲ್ಲಿ ಶೇಕಡಾ 15% ಮಳೆ ಕೊರತೆಯಾಗಿದ್ದು,ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ್ರೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ಸಾದ್ಯತೆ ಇದೆ .ಬೆಂಗಳೂರು,ಕಲಬುರಗಿ, ವಿಜಯಪುರ ಈ ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.