ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಸಂಬಂಧ ಚರ್ಚೆಗೆ ಗ್ರಾಸವಾಗಿರು ಯತೀಂದ್ರ ಹೇಳಿಕೆ ಸಂಬಂಧ ಹೋಮ್ ಮಿನಿಸ್ಟರ್ ಪರಮೇಶ್ವರ್ ಪ್ರತಿಕ್ರಿಯಿಸಿ, ಅವರದ್ದು ನಾಯಕತ್ವ ಕುರಿತಲ್ಲ, ಸತೀಶ್ ಜಾರಕಿಹೊಳಿಗಿರುವ ಸೈದ್ಧಾಂತಿಕ ಬದ್ಧತೆ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಅವರು ಮುಂದಿನ ನಾಯಕತ್ವ ದೃಷ್ಟಿಯಲ್ಲಿಟ್ಟುಕೊಂಡು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಹೇಳಿದ್ದು, ಅವರು ಸಿದ್ದರಾಮಯ್ಯನವರ ಉತ್ತರಾಧಿಕಾರಿ ಅಂತ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ದಾರಿಯಲ್ಲೇ ಸತೀಶ್ ಇದ್ದಾರೆ. ಅಹಿಂದ ಪ್ರಾರಂಭವಾದಾಗ ಸತೀಶ್ ಜಾರಕಿಹೊಳಿ ಬಹಳ ಮುಖ್ಯ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಹಾಕಿದರು.
ಯತೀಂದ್ರ ಅವರು ಸತೀಶ್ ಅವರ ನಾಯಕತ್ವ ಗುಣ, ಪಕ್ಷದ ಮೇಲಿನ ಬದ್ಧತೆ, ಸಮಾಜದ ಬದ್ಧತೆ ಬಗ್ಗೆ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಸಿಎಂ ಬದಲಾವಣೆ ರೇಸ್‌ನಲ್ಲಿ ನೀವಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದನ್ನೆಲ್ಲಾ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಿಎಲ್‌ಪಿ ಕರೆದು ಶಾಸಕರ ಅಭಿಪ್ರಾಯವನ್ನು ಪಡೆಯುತ್ತಾರೆ ಎಂದರು.