ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

Sampriya

ಶುಕ್ರವಾರ, 31 ಅಕ್ಟೋಬರ್ 2025 (19:29 IST)
ಬೆಂಗಳೂರು: ನವೆಂಬರ್ 21 ಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಘಟನೆ ಇಂದು ನಡೆಯಿತು. ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಪ್ರಸಂಗ ಶುಕ್ರವಾರ ನಡೆಯಿತು.

ವಿಧಾನಸೌಧದಲ್ಲಿ ಸಿಎಂಗೆ ಸುದ್ದಿಗಾರರು, ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗ್ತಾರೆ ಎಂದಾಗ, ಯಾರ್ ಹೇಳಿದ್ದು? ನಿನಗೆ ಯಾರ್ ಹೇಳಿದ್ರು? ನಿನಗೆ ಹೆಂಗೆ ಗೊತ್ತಾಯ್ತು? ಯಾವ ಪತ್ರಿಕೆ? ಯಾವ ಪತ್ರಿಕೆ ನೋಡಿದೆ ನೀನು? ನಾನು ಎಲ್ಲಾ ಪತ್ರಿಕೆ ಓದುತ್ತೇನೆ. ಯಾವುದರಲ್ಲೂ ಬಂದಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದರು. 

ಇನ್ನೂ ಕಳೆದ ಕೆಲ ತಿಂಗಳಿನಿಂದ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರೈಸಲಿದ್ದು, ಮುಖ್ಯಮಂತ್ರಿ ಬದಲಾವಣೆ ಕೂಗು ಹೆಚ್ಚಾಗಿದೆ.

 ಕೆಲವರು "ನವೆಂಬರ್ ಕ್ರಾಂತಿ" ಎನ್ನುತ್ತಿದ್ದಾರೆ. "ಆದಾಗ್ಯೂ, ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ನಾನೇ ಐದು ಪೂರ್ಣಗೊಳಿಸುವುದಾಗಿ ಸಿದ್ದರಾಮಯ್ಯ ಅವರು ಮತ್ತೇ ಪುನರುಚ್ಚರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ