ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಬಿಡುವು ಪಡೆದಿರುವ ಮಳೆರಾಯ ಮತ್ತೆ ಈ ವಾರ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು, ಪುತ್ತೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಗೆ ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ಸಾರ್ವಜನಿಕರು ಕೊಂಚ ನಿರಾಳವಾಗುತ್ತಿರುವಂತೆಯೇ ಮತ್ತೆ ಈ ವಾರ ಭಾರೀ ಮಳೆಯಾಗುವ ಸೂಚನೆ ಸಿಕ್ಕಿದ್ದು, ಜನ ಆತಂಕಗೊಳ್ಳುವಂತೆ ಮಾಡಿದೆ.
ಈಗಾಗಲೇ ದ.ಕ. ಜಿಲ್ಲೆಯಲ್ಲಿ ದಶಕದಲ್ಲೇ ದಾಖಲೆ ಎನ್ನುವಷ್ಟು ಮಳೆಯಾಗಿದೆ. ಇದೀಗ ಮತ್ತೆ ಧಾರಾಕಾರ ಮಳೆಯ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದಲ್ಲಿ ಮಾತ್ರವಲ್ಲ, ತಮಿಳುನಾಡು, ಜಮ್ಮು ಕಾಶ್ಮೀರ, ಚಂಡೀಘಡ, ಹರ್ಯಾಣ ಜಾರ್ಖಂಡ್ ಸೇರಿದಂತೆ ದೇಶದ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.