ಉದ್ಯಾನಕ್ಕೆ ಸಾಕು ಪ್ರಾಣಿಗಳ ಜೊತೆ ಬರುವವರು ಮಲ ಚೀಲವನ್ನೂ ತರಬೇಕು; ನೋಟೀಸ್

ಶುಕ್ರವಾರ, 1 ಅಕ್ಟೋಬರ್ 2021 (11:03 IST)
ಬೆಂಗಳೂರು : ಸಾರ್ವಜನಿಕ ಉದ್ಯಾನಗಳಿಗೆ ಸಾಕು ಪ್ರಾಣಿಗಳನ್ನು ಕರೆದುಕೊಂಡು ಬರುವವರು ತಮ್ಮ ಜೊತೆ ಮಲ ಚೀಲ ತರಬೇಕು ಎಂಬ ನಿಯಮವನ್ನು ಕಡ್ಡಾಯಗೊಳಿಸಲು ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿ ಸಂಬಂಧ ಕರ್ನಾಟಕ ಹೈಕೋರ್ಟ್ ಗುರುವಾರ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದೆ.

ತಮ್ಮ ಸಾಕು ಪ್ರಾಣಿಗಳೊಂದಿಗೆ, ಅದರಲ್ಲೂ ಸಾಕು ನಾಯಿ ಜೊತೆಗೆ ಸಾರ್ವಜನಿಕ ಉದ್ಯಾನಗಳಿಗೆ ಬರುವ ಅವುಗಳ ಮಾಲೀಕರು ತಮ್ಮೊಂದಿಗೆ ಜೈವಿಕ ವಿಘಟನೀಯ ಮಲ ಚೀಲ (Biodegradable poop bag), ಅಂದರೆ ಸುಲಭವಾಗಿ ಮಣ್ಣಿನಲ್ಲಿ ಕರಗಬಲ್ಲ ಚೀಲವನ್ನು ತರಬೇಕು. ಈ ನಿಯಮವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಡ್ಡಾಯಗೊಳಿಸಬೇಕು. ಈ ವಿಷಯವಾಗಿ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಮನವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಪ್ರಾಣಿಗಳ ಪರ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆ ಕಂಪ್ಯಾಷನ್ ಅನ್ಲಿಮಿಟೆಡ್ ಪ್ಲಸ್ ಆಯಕ್ಷನ್ (ಕ್ಯೂಪಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ