ಠುಸ್ ಆಯ್ತು ಸಾಹುಕಾರ್ ಬಾಂಬ್!
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಮಾಹಿತಿ ಬಹಿರಂಗಪಡಿಸುವೆ ಎಂದು ಹೇಳಿದ್ದ ಶಾಸಕ ರಮೇಶ್ ಜಾರಕಿಹೊಳಿ ಹಿಂದೆ ಸರಿದಿದ್ದಾರೆ. ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ. ಈ ಬಗ್ಗೆ ಪತ್ರಕರ್ತರಿಗೆ ಶಾಸಕ ರಮೇಶ ಜಾರಕಿಹೋಳಿ ಗೋಕಾಕ್ ಕಚೇರಿಯಿಂದ ಮಾಹಿತಿ ಲಭ್ಯವಾಗಿದ್ದು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪೊಲೀಸ್ ತನಿಖೆ ನಡೆಯುತ್ತಿದೆ. ಪೋಲಿಸ್ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಮಾತನಾಡಿದರೆ ತನಿಖೆ ದಾರಿ ತಪ್ಪಬಹುದು ಎನ್ನುವ ಉದ್ದೇಶದಿಂದ ಪತ್ರಿಕಾಗೋಷ್ಠಿ ಮುಂದೂಡಿರುವುದಾಗಿ ಶಾಸಕರ ಆಪ್ತ ಸಹಾಯಕ ತಿಳಿಸಿದ್ದಾರೆ