ಮುಣಿದ ವರುಣನಿಗೆ ಕೇರಳದಲ್ಲಿ ಸಾವಿರಾರು ಕೋಟಿ ನಷ್ಟ

ಸೋಮವಾರ, 13 ಆಗಸ್ಟ್ 2018 (19:54 IST)
ಧಾರಾಕಾರವಾಗಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೇರಳದಲ್ಲಿ ಏಳೆಂಟು ಸಾವಿರ ಕೋಟಿಗೂ ಅಧಿಕ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ.

ಕೇರಳದಲ್ಲಿ ಮುಣಿದ ವರುಣನಿಂದಾಗಾಗಿ ಅಪಾರ ಹಾನಿ ಸಂಭವಿಸಿದೆ. ಈವರೆಗೆ 14 ಜಿಲ್ಲೆಗಳಲ್ಲಿ ಏಳೆಂಟು ಸಾವಿರ ಕೋಟಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ವೀಕ್ಷಣೆ ಮಾಡಿದರು. ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ತಕ್ಷಣವಾಗಿ 100 ಕೋಟಿ ರೂ. ಬಿಡುಗಡೆಗೊಳಿಸುವುದಾಗಿ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು 1200 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ