‘ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಾವಿರಾರು ಸರಕಾರಿ ಹುದ್ದೆಗಳು ಖಾಲಿ’

ಸೋಮವಾರ, 16 ಸೆಪ್ಟಂಬರ್ 2019 (21:01 IST)
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ.

ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ನೀಡಿ ಕೆಪಿಎಸ್‍ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ ಮಾಡಿ ಖಾಲಿ ಹುದ್ದೆ ತುಂಬಲು ಕ್ರಮಕೈಗೊಳ್ಳಬೇಕು ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಕರೆದಿದ್ದ ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕಾ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ್ರು.

ಈ ಭಾಗದಲ್ಲಿ ಇಂಗ್ಲೀಷ್, ವಿಜ್ಞಾನ ವಿಷಯಗಳ ಶಿಕ್ಷಕರೇ ಸಿಗುತ್ತಿಲ್ಲ. ಹಾಗಾಗಿ ಇಂತಹ ವಿಷಯಗಳಲ್ಲಿ ತರಬೇತಿ  ಕೊಡಿಸುವುದು ಅತ್ಯಗತ್ಯವಾಗಿದೆ. ಮುಂದಿನ ಅಕ್ಟೋಬರ್ ಅಥವಾ ನವೆಂಬರ್‍ನಲ್ಲಿ ಪರೀಕ್ಷೆಗಳನ್ನು ನಡೆಸಲು ಕ್ರಮಕೈಗೊಳ್ಳಬೇಕು ಎಂದರು. 

ಕೌಶಲ್ಯಾಭಿವೃದ್ಧಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿರುವ ಮಹಿಳಾ ಅಭ್ಯರ್ಥಿಗಳಿಗೆ ಜೀವನೋಪಾಯ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವ ಮೂಲಕ ಅವರನ್ನು ಸಶಕ್ತರಾಗಿ ಮಾಡಬೇಕು ಎಂದ್ರು.  ಇಂತಹ ತರಬೇತಿಗಳನ್ನು ಕೊಡಿಸುವ ಬಗ್ಗೆ ಕೆಕೆಆರ್‍ಡಿಬಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದೂ ಹೇಳಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ