ನಗನೂರು ಗ್ರಾಮದಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು
ಬೇಸಿಗೆ ರಜೆಯಲ್ಲಿರುವ ಮಕ್ಕಳು ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಇನ್ನೂ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಾಲಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.