ಮಂಡ್ಯ ಆಯ್ತು ಇದೀಗ ಕಲಬುರಗಿಯಲ್ಲಿ ಉಮೇಶ್ ಜಾಧವ್ ಗೆ ಸೆಡ್ಡು ಹೊಡೆಯಲಿದ್ದಾರೆ ಮೂವರು ಜಾಧವ್

ಶುಕ್ರವಾರ, 5 ಏಪ್ರಿಲ್ 2019 (13:53 IST)
ಕಲಬುರಗಿ : ಮಂಡ್ಯ ಕ್ಷೆತ್ರದಲ್ಲಿ ಸುಮಲತಾ ಅವರಿಗೆ ಎದುರಾದ ಸಂಕಷ್ಟ ಇದೀಗ ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಗೂ ಎದುರಾಗಿದೆ.


ಹೌದು. ಮತದಾರರಲ್ಲಿ ಗೊಂದಲ ಮೂಡಿಸಲು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ ಸುಮಲತಾ ಅಂಬರೀಶ್ ಅವರ ಜೊತೆಗೆ ಮೂರು ಜನ ಸುಮಲತಾ ಎಂಬವರು ನಾಮಪತ್ರ ಸಲ್ಲಿಸಿದ್ದರು. ಅದೇರೀತಿ ಇದೀಗ ಕಲಬುರಗಿ ಕ್ಷೇತ್ರದಲ್ಲಿ ಕಣಕ್ಕೀಳಿಯುತ್ತಿರುವ ಉಮೇಶ್ ಜಾಧವ್ ಮತ ವಿಭಜಿಸಲು, ಜಾಧವ್ ಹೆಸರಿನ ಮೂವರು ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.


ಕಲಬುರಗಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಂಕರ್ ಜಾಧವ್, ವಿಠಲ್ ಜಾಧವ್ ಹಾಗೂ ವಿಜಯ್ ಜಾಧವ್ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಡಾ.ಉಮೇಶ್ ಜಾಧವ್ ಮತಗಳು ಒಡೆಯಲು ವಿಪಕ್ಷಗಳು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ