ಕೊರೊನಾಕ್ಕೆ ಮೂರು ಬಲಿ : ನಿಷೇಧಾಜ್ಞೆ ಏ. 30 ರವರೆಗೆ ವಿಸ್ತರಣೆ
ಮಾರಕ ಕೊರೊನಾ ವೈರಸ್ ಗೆ ಈಗಾಗಲೇ ಮೂವರು ಸಾವನ್ನಪ್ಪಿದ್ದರಿಂದಾಗಿ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ.
ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ.
ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.