ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು
ಕಾಂಗ್ರೆಸ್ ಪಕ್ಷ ಘೋಷಿಸಿದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಕೂಡ ಒಂದು. ಗೃಹಲಕ್ಷ್ಮೀ ಹಣ ಪ್ರತೀ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ಜಮವಾಗುತ್ತಿದೆ. ಆದರೆ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಹಣ ಜಮಾವಣೆಗೊಂಡಿಲ್ಲ. ಇದರಿಂದಾಗಿ ಅದೆಷ್ಟೋ ಜನ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಈ ಹಣವನ್ನು ಬಿಡುಗಡೆ ಮಾಡುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.