ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

Sampriya

ಭಾನುವಾರ, 17 ಆಗಸ್ಟ್ 2025 (11:22 IST)
ಬೆಂಗಳೂರು: ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಿತ್ತಳೆ ಮತ್ತು ಹಳದಿ ಎಚ್ಚರಿಕೆಗಳನ್ನು ನೀಡಲಾಗಿದೆ. 

ಇದರ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಶುಕ್ರವಾರ ಭಾರೀ ಮಳೆಯಾಗಿತ್ತು.  ಬೆಂಗಳೂರಿನಲ್ಲೂ ಕೆಲ ಗಂಟೆ ನಿರಂತರ ಮಳೆಯಾಗಿದೆ. 


ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಪರಿಣಾಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ