ಬಸ್ ಹರಿದು ಮೂವರು ವಿದ್ಯಾರ್ಥಿಗಳು ದುರ್ಮರಣ!
ಮೃತ ವಿದ್ಯಾರ್ಥಿಗಳನ್ನು ಎಮ್ಮಿಗನೂರಿನ ಕನಕರಾಜು (19), ಮುರುಡಿ ಗ್ರಾಮದ ಶಂಕರ (18), ಸಂಡೂರು ತಾಲೂಕಿನ ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಡುಬಡತನಲ್ಲಿ ಬೆಳೆದ ಈ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರಿಸಲು ಶಾಲೆಗೆ ರಜೆ ಇರುವಾಗಲೆಲ್ಲ ಪಾರ್ಟ್ ಟೈಮ್ ಕೆಲಸಕ್ಕೆ ಹೋಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಕೆಲಸ ಮುಗಿಸಿಕೊಂಡು ಹಾಸ್ಟೆಲ್ಗೆ ವಾಪಸ್ ಹೋಗಲು ರಸ್ತೆ ದಾಟುವಾಗ ಕಲಬುರಗಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.