ಕೆರೆಗೆ ಹಾರಿದ ಒಂದೇ ಕುಟುಂಬದ ಮೂವರು ಮಹಿಳೆಯರು!
ಕೌಟುಂಬಿಕ ಕಲಹದ ಹಿನ್ನೆಲೆ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬರು ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ನಡೆದಿದೆ.
ಮಾಗಡಿ ಟೌನ್‍ನ ನೇಯಿಗೆ ಬೀದಿ ನಿವಾಸಿಗಳಾದ ಮೂವರು ಮಾಗಡಿ ಟೌನ್‍ನ ಗೌರಮ್ಮನ ಕೆರೆಗೆ ಹಾರಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದು, ಮೃತ ಮಹಿಳೆಯನ್ನು ಅಜ್ಜಿ ಶಾಂತಾ ಭಾಯಿ (50) ಎಂದು ಗುರುತಿಸಲಾಗಿದೆ.
ಭಾನುವಾರ ಈ ಮೂರು ಮಹಿಳೆಯರು ಕೆರೆಗೆ ಹಾರಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣ ಉಷಾ ಭಾಯಿ ಹಾಗೂ ನಿರ್ಮಲಾ ಭಾಯಿಯನ್ನು ರಕ್ಷಣೆ ಮಾಡಿದ್ದು, ಶಾಂತಾಭಾಯಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ತನಿಖೆ ಮಾಡಿದ್ದು, ಇವರು ಒಂದೇ ಕುಟುಂಬದ ಮಹಿಳೆಯರು ಎಂಬುದು ತಿಳಿದುಬಂದಿದೆ.
ಕೌಟುಂಬಿಕ ಕಲಹದಿಂದ ಇವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಮಾಗಡಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.