ಹುಲಿ ಚರ್ಮ ಮಾರಾಟ ದಂಧೆ: ಇಬ್ಬರ ಬಂಧನ

ಬುಧವಾರ, 4 ಮಾರ್ಚ್ 2015 (13:26 IST)
ಹುಲಿ ಚರ್ಮದ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ನಗರದ ಸಿಟಿ ಮಾರ್ಕೆಟ್ ಠಾಣಾ ಪೊಲೀಸರು ಇಂದು ನಗರದ ಲಾಡ್ಜ್‌ವೊಂದರಲ್ಲಿ ಬಂಧಿಸಿದ್ದಾರೆ. 
 
ಬಂಧಿತ ಆರೋಪಿಗಳನ್ನು ಜಗದೀಶ್ ಹಾಗೂ ಡಾ.ಇಫ್ತಿಕಾರ್ ಎನ್ನಲಾಗಿದ್ದು, ಬಂಧಿಸಲಾಗಿದೆ. 
 
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು, ಆರೋಪಿಗಳು ಹುಲಿ ಚರ್ಮ ಮಾರಾಟಕ್ಕಾಗಿ ಬೆಂಗಳೂರಿಗೆ ಬಂದು ಲಾಡ್ಜ್‌ವೊಂದರಲ್ಲಿ ತಂಗಿದ್ದರು. ಅಲ್ಲದೆ ಅದನ್ನು ಮಾರಾಟ ಮಾಡಲು ಪ್ರಯತ್ನ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾಹಿತಿ ತಿಳಿದು ರಹಸ್ಯ ಕಾರ್ಯಾಚರಣೆ ನಡೆಸುವ ಮೂಲಕ ಬಂಧಿಸಲಾಗಿದೆ ಎಂದಿದ್ದಾರೆ. 
 
ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಟಿ ಮಾರ್ಕೆಟ್ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಬಂಧಿತರಿಂದ ಹುಲಿ ಚರ್ಮವನ್ನು ವಶಪಡಿಸಿಕೊಂಡಿದ್ದು, ಅದರ ಬೆಲೆ ಸುಮಾರು 50 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ