ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಇಂದು ಹಿಂದೆಂದೂ ಕಾಣದ ಭದ್ರತೆ
ಸೋಮವಾರ, 19 ಮಾರ್ಚ್ 2018 (10:43 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಗೆ ಇಂದು ಬಿಗಿ ಭದ್ರತೆ ಒದಗಿಸಲಾಗಿದೆ. ಅದಕ್ಕೆ ಕಾರಣವೇನು ಗೊತ್ತಾ?
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಪ್ರತ್ಯೇಕ ಲಿಂಗಾಯತ ಧರ್ಮ ಚರ್ಚೆ ನಡೆಯಲಿದೆ. ನ್ಯಾ. ಮೋಹನ್ ದಾಸ್ ವರದಿಗೆ ಒಪ್ಪಿಗೆ ಸೂಚಿಸಿ ಲಿಂಗಾಯ ಪ್ರತ್ಯೇಕ ಧರ್ಮ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸುವ ಬಗ್ಗೆ ಚರ್ಚೆ ನಡೆಯಲಿದೆ.
ಈ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನ ನಡೆಯಲಿರುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು, ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಮುನ್ನಚ್ಚರಿಕೆ ಕ್ರಮವಾಗಿ ಸಿಎಂ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ