ಟಿಪ್ಪು ಜಯಂತಿ ಆಚರಣೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಪೊಲೀಸರ ಸಭೆ

ಭಾನುವಾರ, 6 ನವೆಂಬರ್ 2016 (18:06 IST)
ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಗಲಭೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಎಲ್ಲಾ ಪ್ರಮುಖ ಪೊಲೀಸ್ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಈಗಾಗಲೇ ಹೈ ಕೋರ್ಟ್ ಕೂಡಾ ಟಿಪ್ಪು ಜಯಂತಿ ಆಚರಣೆ ಬೇಕಾ ಎಂದು ಪ್ರಶ್ನೆ ಮಾಡಿತ್ತು. ಅಲ್ಲದೆ ಸೂಕ್ತ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿತ್ತು. ಪ್ರತಿಪಕ್ಷ ಹಾಗೂ ಕೆಲವು ಬಲಪಂಥೀಯ ಸಂಘಟನೆಗಳು ಪ್ರತಿಭಟನೆಯ ಬೆದರಿಕೆಯೊಡ್ಡಿದೆ.

ಕಳೆದ ವರ್ಷ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಡಿಕೇರಿಯಲ್ಲಿ ಗಲಭೆ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಯಾವ ರೀತಿ ಭದ್ರತೆ ಕೈಗೊಳ್ಳಬೇಕು ಎಂಬುದರ ಕುರಿತಾಗಿ ಸಮಾಲೋಚನೆ ನಡೆಸಲು ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮೆರವಣಿಗೆಗೆ ಅವಕಾಶ ಕೊಡಬಾರದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ