ಟಿಪ್ಪು ಜಯಂತಿ ಆಚರಣೆ ಹಿನ್ನಲೆ; ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ
ಶುಕ್ರವಾರ, 9 ನವೆಂಬರ್ 2018 (07:09 IST)
ಕೊಡಗು : ವಿರೋಧದ ನಡುವೆಯು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾರಣ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಶನಿವಾರ ಕೊಡಗು ಬಂದ್ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಯಾಗಲಿದೆ.
ಈ ಹಿಂದೆ ವಿರೋಧವಿದ್ದರು ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸಿದ್ದರಿಂದ ಮಡಿಕೇರಿಯಲ್ಲಿ ಘರ್ಷಣೆ ನಡೆದಿದ್ದು, ಆ ವೇಳೆ ವ್ಯಕ್ತಿಯೊಬ್ಬರು ಸಾವನಪ್ಪಿದ್ದರು. ಆದಕಾರಣ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಸುಮನಾ ಡಿ ಪನ್ನೇಕರ್ ತಿಳಿಸಿದ್ದಾರೆ.
ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಸುಮನಾ ಡಿ ಪನ್ನೇಕರ್, ಕೊಡಗು ಜಿಲ್ಲೆಯ ಸೋಮವಾರಪೇಟೆ, ಮಡಿಕೇರಿ ಹಾಗೂ ವಿರಾಜಪೇಟೆಗಳಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೊರ ಜಿಲ್ಲೆಯಿಂದ ಕಿಡಿಗೇಡಿಗಳು ಬಾರದಂತೆ 10 ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.
ಹಾಗೇ ಈಗಾಗಲೇ ಬಂದ್‍ಗೆ ಕರೆ ಕೊಟ್ಟಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಬಲವಂತವಾಗಿ ಬಂದ್ ಮಾಡಿಸಿದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.