ವಿರೋಧದ ಮಧ್ಯೆಯೂ ನ.10 ರಂದು ಟಿಪ್ಪು ಜಯಂತಿ ಆಚರಣೆಗೆ ಸರಕಾರ ನಿರ್ಧಾರ

ಬುಧವಾರ, 26 ಅಕ್ಟೋಬರ್ 2016 (18:47 IST)
ವಿರೋಧ ಪಕ್ಷದ ಪ್ರಬಲ ವಿರೋಧದ ನಡುವೆಯೂ ನವೆಂಬರ್ 10ರಂದು ವಿವಾದಿತ ನಾಯಕ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರಕಾರ ಆದೇಶ ನೀಡಿದೆ.
ನವೆಂಬರ್ 10 ರಂದು ಮುಂಜಾನೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರಕಾರ ಸಿದ್ಧತೆ ನಡೆಸುತ್ತಿದೆ. 
 
ವಿವಾದಿತ ನಾಯಕ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಕುರಿತು ಕಾರ್ಯಕ್ರಮಗಳ ರೂಪರೇಷಗಳನ್ನು ಸಿದ್ಧಪಡಿಸಲು ಅಕ್ಟೋಬರ್ 28 ರಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.
 
ವಿವಾದಿತ ನಾಯಕ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಳೆದ ವರ್ಷ ಟಿಪ್ಪು ಸುಲ್ತಾನ್ ಜಯಂತೆ ಆಚರಣೆ ವಿರೋಧಿಸಿ ರಾಜ್ಯಾದ್ಯಂತ ತೀವ್ರ ಹೋರಾಟಗಳು ನಡೆದಿದ್ದವು. ಈ ವೇಳೆ ಕೊಡಗು ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸದಸ್ಯ ಕುಟ್ಟಪ್ಪನವರ ಹತ್ಯೆಯೂ ನಡೆದಿತ್ತು. ಇಷ್ಟು ವಿರೋಧದ ಮಧ್ಯೆಯೂ ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಿಸಲು ಮುಂದಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ