ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಆಟೋ ದರ ಬಿಸಿ
ಪರಿಷ್ಕ್ರತ ದರದಂತೆ ಮೊದಲ ಎರಡು ಕಿಲೋಮೀಟರ್ ಪ್ರಯಾಣಕ್ಕೆ ಕನಿಷ್ಠ ದರ 36 ರೂಪಾಯಿಗಳಿರಲಿದೆ. ಎರಡು ಕಿಲೋಮೀಟರ್ ನಂತರದ ಪ್ರಯಾಣಕ್ಕೆ ಪ್ರತಿ ಕಿಲೋಮೀಟರ್ಗೆ ಈ ಮೊದಲು ಇದ್ದ ದರವನ್ನು ₹15 ನಿಂದ ₹18ಕ್ಕೆ ಹೆಚ್ಚಳ ಮಾಡಲಾಗಿದೆ. ಅಂದರೆ ಎರಡು ಕಿ.ಮೀ ನಂತರದ ಪ್ರತಿ ಕಿಲೋಮೀಟರ್ ಪ್ರಯಾಣಕ್ಕೆ 3 ರೂಪಾಯಿ ದರ ಏರಿಸಲಾಗಿದೆ.
ಆಟೋ ಸಂಘಟನೆಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಬಿಬಿಎಂಪಿ ವ್ಯಾಪ್ತಿಗೆ ಒಳಪಡುವಂತೆ ಹೊಸ ಪ್ರಯಾಣ ದರವನ್ನು ಘೋಷಣೆ ಮಾಡಿದ್ದಾರೆ. ಆಗಸ್ಟ್ 1 ರಿಂದ ಹೊಸ ದರ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.