ಕೇಂದ್ರದ ಕೃಷಿ ಕಾನೂನು ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಕೆಲವು ರೈತ ಸಂಘಟನೆಗಳು ಭಾರತ ಬಂದ್‌ಗೆ ಇಂದು ಕರೆ ನೀಡಿದ್ದು, ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲಲ್ಲಿ ಕೆಲವರು ಪ್ರತಿಭಟನೆ ಮಾಡುತ್ತಿರುವುದನ್ನು ಹೊರತುಪಡಿಸಿದರೆ ಈ ಪ್ರತಿಭಟನೆಗೆ ಜನರು ಉತ್ಸಾಹ ತೋರುತ್ತಿಲ್ಲ.
ಹಲವೆಡೆಗಳಲ್ಲಿ ಪ್ರತಿಭಟನಾಕಾರರೇ ಜನರು, ವ್ಯಾಪಾರಸ್ಥರಲ್ಲಿ ಹೋಗಿ ಧಮ್ಕಿ ಹಾಕುತ್ತಿರುವ ಘಟನೆಗಳು ನಡೆಯುತ್ತಿವೆ. ಆದರೆ ಕೆಲವರು ಮಾತ್ರ ಪ್ರತಿಭಟನಾಕಾರರ ಉಸಾಬರಿಯೇ ಬೇಡವೆಂದು ವ್ಯಾಪಾರ- ವಹಿವಾಟು ಬಂದ್ ಮಾಡಿದ್ದರೆ, ಹಲವು ಜಿಲ್ಲೆಗಳಲ್ಲಿ ಯಾರೂ ಪ್ರತಿಭಟನಾಕಾರರ ಮಾತನ್ನು ಕೇಳದೇ ಇರುವುದು ಕಂಡುಬಂದಿದೆ. ಅಂಗಡಿ ಮುಂಗಟ್ಟು ಮುಚ್ಚಿ ಬಂದ್‌ಗೆ ಸಹಕರಿಸುವಂತೆ ಆಟೋ ಮೂಲಕ ಮನವಿ ಮಾಡಿದರೂ ಯಾರೂ ಕಿವಿಗೊಡುತ್ತಿಲ್ಲ. ಎಂದಿನಂತೆ ತಮ್ಮ ಕರ್ತವ್ಯದಲ್ಲಿ ತೊಡಗಿರುವುದು ಕಂಡುಬಂದಿದೆ.