ಖರ್ಗೆ ವಿರುದ್ಧ ಸೂಕ್ತ ಅಭ್ಯರ್ಥಿ ಕಣಕ್ಕೆ ಎಂದ ಬಿಜೆಪಿ ಮುಖಂಡ

ಭಾನುವಾರ, 7 ಅಕ್ಟೋಬರ್ 2018 (19:12 IST)
ಲೋಕಸಭಾ ಕಾಂಗ್ರೆಸ್ ನಾಯಕ‌ ಮಲ್ಲಿಕಾರ್ಜುನ ಖರ್ಗೆ ಪ್ರತಿನಿಧಿಸುವ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಸೀಕ್ರೆಟ್ ಇಟ್ಟಿದ್ದು ಸೂಕ್ತ ಸಮಯದಲ್ಲಿ ಅಭ್ಯರ್ಥಿ ಹೆಸರು ಘೋಷಿಸುತ್ತೇವೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಹೇಳಿದ್ದಾರೆ.

ಖರ್ಗೆ ವಿರುದ್ಧ ಸೂಕ್ತ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್ ತಿಳಿಸಿದ್ದಾರೆ. ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ಮಾತನಾಡಿದ ಮಾಲೀಕಯ್ಯ ಗುತ್ತೇದಾರ್, ಕಲಬುರಗಿ ಲೋಕಸಭಾ ಕ್ಷೇತ್ರವನ್ನು‌ ನಾವೇ ಗೆಲ್ಲುತ್ತೇವೆ. ಈ ಚುನಾವಣೆ ಮಲ್ಲಿಕಾರ್ಜುನ ಖರ್ಗೆ ವರ್ಸಸ್ ಮಾಲೀಕಯ್ಯ ಗುತ್ತೇದಾರ್ ಅಲ್ಲ, ನರೇಂದ್ರ ಮೋದಿ ವರ್ಸಸ್ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ಇದೆ. ಬಿಜೆಪಿ ಅಭ್ಯರ್ಥಿ ಯಾರಿರುತ್ತಾರೆ ಎನ್ನುವುದು ಮುಖ್ಯ ಅಲ್ಲ, ಪ್ರಧಾನಿ ಮೋದಿ ನೋಡಿ ಜನ ಮತ ಹಾಕುತ್ತಾರೆ. ಹೀಗಾಗಿಯೇ ಬಿಜೆಪಿ 22 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ.

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸೂಕ್ತ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ. ಹೈದರಾಬಾದ್ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ ನನ್ನ ಮೇಲಿದ್ದು, ಮೂರೂ ಕ್ಷೇತ್ರಗಳಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಪ್ರಯತ್ನ ಮಾಡುವೆ ಎಂದು ಮಾಲೀಕಯ್ಯ ಗುತ್ತೇದಾರ್ ತಿಳಿಸಿದರು.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ