ತಂಬಾಕು ತಿನ್ನುವಂತಿಲ್ಲ – ಮಾರುವಂತಿಲ್ಲ

ಬುಧವಾರ, 20 ಮೇ 2020 (18:15 IST)
ತಂಬಾಕು ಪ್ರಿಯರಿಗೆ ಬಿಗ್ ಶಾಕ್ ಸುದ್ದಿಯೊಂದು ಬಂದಿದೆ.

ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ರೋಗ ಹತೋಟಿಗೆ ಬರುವವರೆಗೂ ತಂಬಾಕು ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.

ನಿಯಮ ಉಲ್ಲಂಘಿಸಿದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆ 1897, ವಿಪತ್ತು ನಿರ್ವಹಣಾ ಕಾಯ್ದೆ 2005, ಐ.ಪಿ.ಸಿ 1960 ಹಾಗೂ ಸಿ.ಆರ್.ಪಿ.ಸಿ. ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಹೀಗಂತ ಹಾಸನ ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ