ಇಂದು ಸಿಂಧನೂರಿಗೆ ಅಮಿತ್ ಶಾ ಆಗಮನ

ಗುರುವಾರ, 14 ಫೆಬ್ರವರಿ 2019 (14:50 IST)
ಬಿಸಿಲನಾಡು ರಾಯಚೂರು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಭೇಟಿ ನೀಡಲಿದ್ದಾರೆ.

ಈಗಾಗಲೇ ಲೋಕಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ತನ್ನ ಘಟಾನುಘಟಿ ನಾಯಕರನ್ನು ರಾಜ್ಯಕ್ಕೆ ಕಳಿಸುತ್ತಿದ್ದು, ಅದರ ಭಾಗವಾಗಿ ಅಮಿತ್ ಷಾ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆಯುವ ಬೃಹತ್ ಕಾರ್ಯಕರ್ತರ  ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವಿದ್ದು, ಈ ಸಮಾವೇಶದಲ್ಲಿ ಒಂದು ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಇದಕ್ಕಾಗಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ದತೆಗಳನ್ನ ಮಾಡಲಾಗಿದೆ.

ಬೃಹತ್ ವೇದಿಕೆಯೂ ಕೂಡಾ ಸಿದ್ಧಗೊಂಡಿದೆ. ಬಳ್ಳಾರಿಯ ಜಿಂದಾಲ್ ನಿಂದ ಹೆಲಿಕಾಪ್ಟರ್ ಮೂಲಕ ಮದ್ಯಾಹ್ನ 4 ಗಂಟೆಗೆ ಸಿಂಧನೂರಿಗೆ ಆಗಮಿಸಲಿರುವ ಅಮಿತ್ ಷಾ ಸಮಾವೇಶವನ್ನ ಉದ್ದೇಶಿಸಿ ಮಾತನಾಡಲಿದ ಬಳಿಕ 5.15 ಕ್ಕೆ ಹೆಲಿಕಾಪ್ಟರ್ ಮೂಲಕ ಹೊಸಪೇಟೆಗೆ ತೆರಳಲಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ