ಇಂದು ಸಿದ್ದರಾಮಯ್ಯ ಸರ್ಕಾರದಿಂದ ಬಜೆಟ್ ಮಂಡನೆ; ಘೋಷಣೆಯಾಗಲಿರುವ ಯೋಜನೆಗಳೇನು ಗೊತ್ತಾ...?

ಶುಕ್ರವಾರ, 16 ಫೆಬ್ರವರಿ 2018 (07:42 IST)
ಬೆಂಗಳೂರು : ಶುಕ್ರವಾರ (ಇಂದು )ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನೇತೃತ್ವ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಲಿದ್ದು, ಹಲವು ಜನಪ್ರಿಯ ಯೋಜನೆಗಳು ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆಯಿದೆ .


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡುತ್ತಾರೆಂಬ ಬಹು ನಿರೀಕ್ಷೆಯಿದೆ. ಅಲ್ಲದೆ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯನವರು ಈ ವರ್ಗಕ್ಕೆ ವಿಶೇಷ ಆದ್ಯತೆ ನೀಡಬಹುದೆಂದು ಹೇಳಲಾಗುತ್ತಿದೆ.


ಬಜೆಟ್ ನಲ್ಲಿ ನೀರಾವರಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ. ಜೊತೆಗೆ ನಗರ ಪ್ರದೇಶಗಳ ಮತದಾರರನ್ನು ಸೆಳೆಯಲು ಕೆಲವೊಂದು ಯೋಜನೆ ಘೋಷಿಸುವ ಸಾಧ್ಯತೆಯಿದೆ. ಅಲ್ಲದೇ ಬೆಂಗಳೂರು ನಗರಾಭಿವೃದ್ದಿಗೆ ಆದ್ಯತೆ ನೀಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ