ಇಂದು ಸಿಎಂ ಸಿದ್ದರಾಮಯ್ಯ- ದಿಗ್ವಿಜಯ್ ಸಿಂಗ್ ಭೇಟಿ ಸಾಧ್ಯತೆ

ಭಾನುವಾರ, 16 ಏಪ್ರಿಲ್ 2017 (11:24 IST)
ಉಪಚುನಾವಣೆಯ ಭರ್ಜರಿ ಗೆಲುವಿನೊಂದಿಗೆ ಪಕ್ಷದ ಹೈಕಮಾಂಡ್‌ ಮುಖಂಡರನ್ನು ಭೇಟಿ ಮಾಡಲು ಆಗಮಿಸಿರುವ ಸಿಎಂ ಸಿದ್ದರಾಮಯ್ಯ, ಇಂದು ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಎರಡು ಸಚಿವ ಸ್ಥಾನಗಳ ಭರ್ತಿ ಮತ್ತು ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತಂತೆ ಒಪ್ಪಿಗೆ ಪಡೆಯಲಿದ್ದಾರೆ ಎನ್ನಲಾಗಿದೆ.
 
ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್‌ಗೆ ಸಚಿವ ಸ್ಥಾನ ನೀಡುವ ಕುರಿತಂತೆ ಕೂಡಾ ಅಂತಿಮ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಕೂಡಾ ಸಾಥ್ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ