ಇಂದು ಸಂಜೆಯೊಳಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

ಶುಕ್ರವಾರ, 13 ಏಪ್ರಿಲ್ 2018 (09:21 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಇದುವರೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದೇ ಇದ್ದ ಕಾಂಗ್ರೆಸ್ ಇಂದು ಸಂಜೆಯೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ನಿನ್ನೆ ತಡರಾತ್ರಿವರೆಗೆ ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ತಯಾರು ಮಾಡಲಾಗಿದೆ ಎನ್ನಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಸಂಜೆಯೊಳಗೆ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಈಗಾಗಲೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೊಳಿಸಿತ್ತು. ಆದರೆ ಕಾಂಗ್ರೆಸ್ ಇದುವರೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದೇ ಇರುವುದಕ್ಕೆ ಆ ಪಕ್ಷದಲ್ಲಿನ ಒಡಕು ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟೀಕಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ