ಮುಂದುವರಿದ ರೈತರ ಆತ್ಮಹತ್ಯೆ ಸರಣಿ: ಇಂದು ಇಬ್ಬರು ಅನ್ನದಾತರು ಕಣ್ಮರೆ

ಶನಿವಾರ, 1 ಆಗಸ್ಟ್ 2015 (13:03 IST)
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಇಂದು ಕೋಲಾರ ಹಾಗೂ ಗದಗ ಜಿಲ್ಲೆಯ ಇಬ್ಬರು ಅನ್ನದಾತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 
 
ಆತ್ಮಹತ್ಯೆಗೆ ಶರಣಾದ ಕೋಲಾರ ರೈತನನ್ನು ನಾಗರಾಜು(55) ಎಂದು ಹೇಳಳಾಗಿದ್ದು, ತಾಲೂಕಿನ ಹರಟಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಈತ ಟಮೊಟೋ ಬೆಳೆ ಬೆಳೆದಿದ್ದ. ಆದರೆ ಬೆಳೆ ಸೂಕ್ತ ನೀರಿಲ್ಲದೆ ಫಲ ಕೈ ಸೇರಲಿಲ್ಲ. ಅಲ್ಲದೆ ಬೆಳೆಗಾಗಿ 2 ಲಕ್ಷ ಕೈ ಸಾಲ ಮಾಡಿಕೊಂಡಿಕೊಂಡಿದ್ದ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮನನೊಂದು ತನ್ನ ತೋಟದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕಱಣ ದಾಖಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 4 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 
 
ಇನ್ನು ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತನೂ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ರೈತನನ್ನು ಮರಿಗೌಡ ಕೆಂಚಗೌಡರ್(68) ಎಂದು ಹೇಳಲಾಗಿದೆ. ಈತ ಬೆಳೆಗಾಗಿ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಕೂಡ 7 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ನಗರಗುಂದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ