ಭ್ರಷ್ಟಾಚಾರ ಪ್ರಕರಣ: ನ್ಯಾ.ಭಾಸ್ಕರ್ ರಾವ್ ಅರ್ಜಿ ವಜಾ

ಮಂಗಳವಾರ, 22 ನವೆಂಬರ್ 2016 (11:09 IST)
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಸಂಬಂಧ ಎಸ್‌ಐಟಿ ಸಲ್ಲಿಸಿರುವ ಹೆಚ್ಚುವರಿ ದೋಷಾರೋಪ ಪಟ್ಟಿ ರದ್ದುಪಡಿಸುವಂತೆ ಮಾಜಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ವಿಶೇಷ ತನಿಖಾದಳ ತಮ್ಮ ವಿರುದ್ಧ ಸಲ್ಲಿಸಿರುವ ದೋಷಾರೋಪ ಪಟ್ಟಿ ಸತ್ಯಕ್ಕೆ ದೂರವಾದದ್ದು, ಇದನ್ನು ರದ್ದುಪಡಿಸಬೇಕೆಂದು ಭಾಸ್ಕರ್ ರಾವ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಆದರೆ, ಇಂದು ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ಬೈರಾರೆಡ್ಡಿ ನೇತೃತ್ವದ ಪೀಠ ಭಾಸ್ಕರ್ ರಾವ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. 
 
ಭಾಸ್ಕರ್ ರಾವ್ ಅವರನ್ನು ಎಸ್‌ಐಟಿ 7 ನೇಯ ಆರೋಪಿಯನ್ನಾಗಿ ಸೇರ್ಪಡೆಗೊಳಿಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಯುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಭಾಸ್ಕರ್ ರಾವ್‌ಗೆ ಸಮನ್ಸ್ ಜಾರಿ ಮಾಡಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ