2.38 ಎಕರೆ ಸರ್ಕಾರಿ ಆಸ್ತಿ ವಶಕ್ಕೆ ಪಡೆದ ಜಿಲ್ಲಾಡಳಿತ

ಶನಿವಾರ, 20 ಡಿಸೆಂಬರ್ 2014 (10:29 IST)
ಖಾಸಗಿಯವರು ಅಕ್ರಮವಾಗಿ ಅತಿಕ್ರಮಣ ಮಾಡಿದ್ದ ಸರ್ಕಾರದ 2.38 ಎಕರೆ ಆಸ್ತಿಯನ್ನು ಬೆಂಗಳೂರು ನಗರ ಜಿಲ್ಲಾಡಳಿತ ವಶಪಡಿಸಿಕೊಳ್ಳಲು ಮುಂದಾಗಿದ್ದು, ನಕಲಿ ಆಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿದೆ. 
 
ಇತ್ತೀಚೆಗೆ ನಗರದ ಜಿಲ್ಲಾಧಿಕಾರಿ ವಿ.ಶಂಕರ್ ನೇತೃತ್ವದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲಾಗಿತ್ತು. ಆಗ ಸರ್ಕಾರಕ್ಕೆ ಸೇರಿದ 2.38 ಎಕರೆ ಆಸ್ತಿ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದವರಿಗೆ ನೋಟಿಸ್ ಜಾರಿಗೊಳಿಸಿದ್ದು, ಇನ್ನು ಕೇವಲ 10 ದಿನಗಳ ಒಳಗೆ ತಮ್ಮ ಎಲ್ಲಾ ಆಸ್ತಿಯನ್ನು ತೆರವುಗೊಳಿಸಿ ಸರ್ಕಾರಕ್ಕೆ ಒಪ್ಪಿಸಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.  
 
ಇನ್ನು ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಶಂಕರ್, ಆಸ್ತಿಯನ್ನು ವಕೀಲ ಡೆವಲಪರ್ಸ್ ಎಂಬ ಖಾಸಗಿ ಕಂಪನಿ ಅಕ್ರಮವಾಗಿ ಅತಿಕ್ರಮಣ ಮಾಡಿತ್ತು. ಅಲ್ಲದೆ ಈ ಜಾಗದಲ್ಲಿ ಪಾರ್ಕ್, ನೀರಿನ ಟ್ಯಾಂಕ್ ಹಾಗೂ ರಸ್ತೆಯನ್ನು ನಿರ್ಮಿಸಿತ್ತು ಎಂದು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ