ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ !

ಬುಧವಾರ, 26 ಅಕ್ಟೋಬರ್ 2022 (11:03 IST)
ಹಾಸನ : ವರ್ಷಕ್ಕೊಮ್ಮೆ ದೇವಾಲಯ ಬಾಗಿಲು ತೆರೆಯುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಈ ಹಿನ್ನೆಲೆ ಹಾಸನಾಂಬೆ ದೇವಿ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬರುತ್ತಿದೆ.

ಹಾಸನಾಂಬೆ ಸಾರ್ವಜನಿಕರ ದರ್ಶನಕ್ಕೆ ಇಂದು 12ನೇ ದಿನದ ಸಾರ್ವಜನಿಕ ದರ್ಶನ ಹಾಗೂ ದೇವಿಯ ದರ್ಶನಕ್ಕೆ ಭಕ್ತರು ಮುಗಿಬೀಳುತ್ತಿದ್ದಾರೆ.

ಇಂದು ಸಂಜೆ 4 ಗಂಟೆಯವರೆಗೂ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಸಂಜೆ 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಮಹಾನೈವೇದ್ಯ ಹಾಗೂ ಉತ್ಸವವಿರುವುದರಿಂದ ಈ ವೇಳೆ ದೇವಿ ದರ್ಶನಕ್ಕೆ ಅವಕಾಶವಿರುವುದಿಲ್ಲ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ