ಇಂದು ಸಂಜೆ ಸಚಿವ ಸಿ.ಎಸ್. ಶಿವಳ್ಳಿ ಅಂತ್ಯಕ್ರಿಯೆ

ಶನಿವಾರ, 23 ಮಾರ್ಚ್ 2019 (11:10 IST)
ಹುಬ್ಬಳ್ಳಿ : ಹೃದಯಾಘಾತದಿಂದ ನಿನ್ನೆ ನಿಧನರಾದ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ.


ಶುಕ್ರವಾರ ರಾತ್ರಿ ಧಾರವಾಡದ ಕುಂದಗೋಳಕ್ಕೆ ಪಾರ್ಥಿವ ಶರೀರ ರವಾನಿಸಲಾಯ್ತು. ಬಳಿಕ ಶಿವಾನಂದ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನರು ಆಗಮಿಸಿ ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.


ನಂತರ ಯರಗುಪ್ಪಿಗೆ ಕೊಂಡೊಯ್ದು ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಮಧ್ಯಾಹ್ನ ಮೂರೂವರೆಗೆ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಡಿಸಿಎಂ ಪರಮೇಶ್ವರ್, ಸಿದ್ದರಾಮಯ್ಯ, ಗೃಹಸಚಿವ ಎಂ.ಬಿ ಪಾಟೀಲ್, ಡಿ.ಕೆ ಶಿವಕುಮಾರ್, ಆರ್.ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನ ಪಡೆಯಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.


ಧಾರವಾಡ ಜಿಲ್ಲಾಯಾದ್ಯಂತ ಇಂದು ಸರ್ಕಾರಿ ರಜೆ ಘೋಷಿಸಲಾಗಿದ್ದು, 3 ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆಗೆ ಸೂಚಿಸಲಾಗಿದೆ. ಆದ್ರೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ